ಎಲ್ಲ ಮರೆತಿರುವಾಗ ಇಲ್ಲಸಲ್ಲದ ನೆವವ
ಹೂಡಿ ಬರದಿರು ಮತ್ತೆ ಹಳೆಯ ನಿನಪೇ
ಕಲ್ಲಿನಂದದಿ ಬಿದ್ದು ತಿಳಿಯಾದ ಎದೆಗೊಳವ
ರಾಡಿಗೊಳಿಸುವೆ ಏಕೆ ಮಧುರ ನೆನಪೇ?
ಕಪ್ಪು ಕಣ್ಣೆನ ನೆಟ್ಟ ನೋಟದರೆಚಣವನ್ನೆ
ತೊಟ್ಟು ಬಾಣದ ಹಾಗೆ ಬಾರದಿರು ನೆನಪೇ
ಬಿರಿದ ತುಟಿಗಳ ತುಂಬು ನಗೆಯ ಕಾರಣವನ್ನೆ
ಹಿರಿದು ಕೊಲ್ಲುಬಳಿಗೆ ಸಾರದಿರು ನೆನಪೇ
ಸತ್ತ ಭೂತವನೆತ್ತಿ ಹದ್ದಿನಂದದಿ ತಂದು
ನನ್ನ ಮನದಂಗಳಕೆ ಹಾಕದಿರು ನೆನಪೇ
ಭವ್ಯ ಭವಿತವ್ಯಕ್ಕೆ ಮೊಗ ಮಡಿ ನಿಂತಿರುವೆ
ಬೆನ್ನಲ್ಲೆ ಇರಿಯದಿರು ಓ! ಚೆನ್ನ ನೆನಪೇ
-ಕೆ ಎಸ್ ನಿಸಾರ್ ಅಹಮದ್
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ